12ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,
14ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.