1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
2ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
3ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
4ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು,
5ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು,