1 ಪೂರ್ವಕಾಲವೃತ್ತಾಂತ 16

ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ

1 Chronicles 16:2 (UKJV) And when David had made an end of offering the burnt offerings and the peace offerings, he blessed the people in the name of the LORD.

11 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

2ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ

3ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.

4ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.

Kannada Bible (Old Version), Bible Society of India.