27ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
28ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ,
29ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
30ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
31ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.