32ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
33ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.