1 ಪೂರ್ವಕಾಲವೃತ್ತಾಂತ 20

ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.

1 Chronicles 20:5 (UKJV) And there was war again with the Philistines; and Elhanan the son of Jair slew Lahmi the brother of Goliath the Gittite, whose spear staff was like a weaver's beam.

3ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.

4ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.

5ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.

6ಗತ್‌ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.

7ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.

Kannada Bible (Old Version), Bible Society of India.