1 ಪೂರ್ವಕಾಲವೃತ್ತಾಂತ 22

ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.

1 Chronicles 22:11 (UKJV) Now, my son, the LORD be with you; and prosper you, and build the house of the LORD your God, as he has said of you.

9ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.

10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.

11ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.

12ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ

13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.

Kannada Bible (Old Version), Bible Society of India.