31ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
33ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.
34ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.