1 ಪೂರ್ವಕಾಲವೃತ್ತಾಂತ 28

ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.

1 Chronicles 28:7 (UKJV) Moreover I will establish his kingdom for ever, if he be constant to do my commandments and my judgments, as at this day.

5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.

6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.

7ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.

8ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.

9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.

Kannada Bible (Old Version), Bible Society of India.