1 ಪೂರ್ವಕಾಲವೃತ್ತಾಂತ 29

ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.

1 Chronicles 29:3 (UKJV) Moreover, because I have set my affection to the house of my God, I have of mine own proper good, of gold and silver, which I have given to the house of my God, over and above all that I have prepared for the holy house.

11 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.

2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.

3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.

4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ

5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.

Kannada Bible (Old Version), Bible Society of India.