24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
25ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.
26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.