21ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
22ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
23ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
24ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
25ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.