1 ಕೊರಿಂಥ 12

ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.

1 Corinthians 12:26 (UKJV) And whether one member suffer, all the members suffer with it; or one member be honoured, all the members rejoice with it.

24ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.

25ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.

26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.

27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.

28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ

Kannada Bible (Old Version), Bible Society of India.