1 ಕೊರಿಂಥ 12

ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;

1 Corinthians 12:5 (UKJV) And there are differences of administrations, but the same Lord.

3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.

4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;

5ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;

6ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.

Kannada Bible (Old Version), Bible Society of India.