7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
9ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.