8ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?
9ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.
10ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ.
11ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
12ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.