30ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
31ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
32ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
34ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.