1 ಕೊರಿಂಥ 15

ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.

1 Corinthians 15:45 (UKJV) And so it is written, The first man Adam was made a living soul; the last Adam was made a life- giving spirit.

43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.

44ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.

45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.

46ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು.

47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.

Kannada Bible (Old Version), Bible Society of India.