7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.