13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.