17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;