1ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
2ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
4ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?