1 ಕೊರಿಂಥ 3

ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.

1 Corinthians 3:5 (UKJV) Who then is Paul, and who is Apollos, but ministers by whom all of you believed, even as the Lord gave to every man?

3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?

4ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?

5ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.

6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.

7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.

Kannada Bible (Old Version), Bible Society of India.