22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.
24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.