1 ರಾಜರು 10

ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.

1 Kings 10:1 (UKJV) And when the queen of Sheba heard of the fame of Solomon concerning the name of the LORD, she came to prove him with hard questions.

1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.

2ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.

3ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.

Kannada Bible (Old Version), Bible Society of India.