1 ರಾಜರು 12

ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.

1 Kings 12:31 (UKJV) And he made an house of high places, and made priests of the low of the people, which were not of the sons of Levi.

29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.

30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.

31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.

32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.

33ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.

Kannada Bible (Old Version), Bible Society of India.