9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
11ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
12ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.
13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.