6ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
7ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.