9ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.