13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.