7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
9ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು