1 ರಾಜರು 8

ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.

1 Kings 8:11 (UKJV) So that the priests could not stand to minister because of the cloud: for the glory of the LORD had filled the house of the LORD.

9ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.

10ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.

11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.

12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.

13ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.

Kannada Bible (Old Version), Bible Society of India.