1 ರಾಜರು 8

ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.

1 Kings 8:65 (UKJV) And at that time Solomon held a feast, and all Israel with him, a great congregation, from the entering in of Hamath unto the river of Egypt, before the LORD our God, seven days and seven days, even fourteen days.

63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.

64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.

65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.

66ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.

Kannada Bible (Old Version), Bible Society of India.