22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;
25ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.