22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.
25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.