1 ಪೇತ್ರ 3

ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.

1 Peter 3:3 (UKJV) Whose adorning let it not be that outward adorning of braiding the hair, and of wearing of gold, or of putting on of apparel;

1ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ

2ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.

3ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.

4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.

5ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.

Kannada Bible (Old Version), Bible Society of India.