6ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.