1 ಸಾಮುವೇಲು 11

ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

1 Samuel 11:1 (UKJV) Then Nahash the Ammonite came up, and encamped against Jabeshgilead: and all the men of Jabesh said unto Nahash, Make a covenant with us, and we will serve you.

1ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

2ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.

3ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.

Kannada Bible (Old Version), Bible Society of India.