8ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
9ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
10ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.
11ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
12ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.