1 ಸಾಮುವೇಲು 13

ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.

1 Samuel 13:12 (UKJV) Therefore said I, The Philistines will come down now upon me to Gilgal, and I have not made supplication unto the LORD: I forced myself therefore, and offered a burnt offering.

10ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.

11ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ

12ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.

13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.

14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.

Kannada Bible (Old Version), Bible Society of India.