15ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;
16ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
17ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.
18ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
19ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.