6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
8ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
10ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.