8ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
10ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.
11ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.