1 ಸಾಮುವೇಲು 29

ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.

1 Samuel 29:8 (UKJV) And David said unto Achish, But what have I done? and what have you found in your servant so long as I have been with you unto this day, that I may not go fight against the enemies of my lord the king?

6ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.

7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.

8ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.

9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.

10ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.

Kannada Bible (Old Version), Bible Society of India.