1 ಸಾಮುವೇಲು 30

ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು

1 Samuel 30:1 (UKJV) And it came to pass, when David and his men were come to Ziklag on the third day, that the Amalekites had invaded the south, and Ziklag, and smitten Ziklag, and burned it with fire;

1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು

2ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.

3ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.

Kannada Bible (Old Version), Bible Society of India.