15ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
16ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
17ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
18ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
19ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;