1ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು.
2ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
4ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.