1 ಸಾಮುವೇಲು 8

ಆಗ ಇಸ್ರಾಯೇಲ್‌ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು

1 Samuel 8:4 (UKJV) Then all the elders of Israel gathered themselves together, and came to Samuel unto Ramah,

2ಅವನ ಚೊಚ್ಚಲ ಮಗನ ಹೆಸರು ಯೋವೇಲ್‌, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.

3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.

4ಆಗ ಇಸ್ರಾಯೇಲ್‌ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು

5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.

6ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.

Kannada Bible (Old Version), Bible Society of India.