1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
2ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
4ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.