1 ಥೆಸಲೋನಿಕರು 5

ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

1 Thessalonians 5:2 (UKJV) For yourselves know perfectly that the day of the Lord so comes as a thief in the night.

1ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.

2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.

4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.

Kannada Bible (Old Version), Bible Society of India.